3:32 AM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತ: ಕೋಟೆಕಾರು ಬೀರಿಯ ಯುವತಿ ವಿಧಿವಶ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

23/02/2024, 20:49

ಮಂಗಳೂರು(reporterkarnataka.com): ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಸಮೋಪದ ಕೋಟೆಕಾರು ಬೀರಿಯ ಯುವತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.
ಕೋಟೆಕಾರು ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬಾಕೆ ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ. ಈಕೆ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ. ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್ ಪೋರ್ಟ್ ನಲ್ಲಿ ಅಧಿಕಾರಿಯಾಗಿ ಕಳೆದ 5 ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತಿದಿನ ಕಂಪೆನಿಯ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನೆಲೆಯಲ್ಲಿ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ 6 ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಪೋಷಕರು ಮಗಳ ಮದುವೆಯ ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ವಿಧಿಯಾಟ ಬೇರೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು