9:53 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ

24/02/2024, 19:28

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ಫಲಾನುಭವಿ ಶಾಲೆಗಳು ಮುಖ್ಯವಾಗಿ ಲ್ಯಾಬ್‌ಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಲೈಬ್ರರಿಗಳು, ಕ್ರೀಡಾ ಉಪಕರಣಗಳು, ಕಲಾ ಕೊಠಡಿ ಇತ್ಯಾದಿಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳೊಂದಿಗೆ ಸುಸಜ್ಜಿತವಾಗಿರುತ್ತವೆ.
ನೀರಿನ ಸಂರಕ್ಷಣೆ, ತ್ಯಾಜ್ಯ ಮರುಬಳಕೆ, ಇಂಧನ-ಸಮರ್ಥ ಮೂಲಸೌಕರ್ಯ ಮತ್ತು ಪಠ್ಯಕ್ರಮದಲ್ಲಿ ಸಾವಯವ ಜೀವನಶೈಲಿಯ ಏಕೀಕರಣದೊಂದಿಗೆ ಹಸಿರು ಶಾಲೆಗಳಾಗಿ ಅಭಿವೃದ್ಧಿಗೊಳ್ಳುತ್ತವೆ. ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಸಮಾಜದಲ್ಲಿ ಜವಾಬ್ದಾರಿ ನಿರ್ವಹಿಸಲು ಶಕ್ತಿ,ಸಾಮರ್ಥ್ಯ, ಸವಾಲು ಎದುರಿಸಲು ಪಿಎಂಶ್ರೀ ಯೋಜನೆ ನೆರವಾಗುತ್ತದೆ ಎಂದರು.
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯನ್ನು ಘೋಷಿಸಿದ್ದು, 14,500 ಶಾಲೆಗಳಲ್ಲಿ ಈ ಶಾಲೆಯೂ ಒಂದು‌ಎಂದು ನುಡಿದರು.
ಆವಿಷ್ಕಾರ ಆಧಾರಿತ, ಕಲಿಕಾ ಕೇಂದ್ರಿತ ಬೋಧನೆಯ ವಿಧಾನಕ್ಕೆ ಒತ್ತು ನೀಡಲಾಗಿದ್ದು ಸರ್ವಾಂಗೀಣವಾಗಿ ವಿದ್ಯಾರ್ಥಿಯ ಪ್ರತಿಭೆಯನ್ನು ಪ್ರೋತ್ಸಾಹಿಸುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭ ಯಾವುದೇ ಕಾರಣಕ್ಕೂ ಧರ್ಮ, ರಾಜಕೀಯ ಶಾಲಾ ವಠಾರ ಸುಳಿಯದಂತೆ ಎಚ್ಚರಿಕೆ ವಹಿಸಬೇಕು. ಶಿಕ್ಷಣವೇ ಆದ್ಯತೆಯಾಗಬೇಕು ಎಂದು ಸೂಚನೆ ನೀಡಿದರು. ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ,ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಶೆಟ್ಟಿ ಮುತ್ತೂರು, ಮುತ್ತೂರು ಪಂಚಾಯತ್ ಉಪಾಧ್ಯಕ್ಷರು ಮತ್ತು ಪಂ. ಸದಸ್ಯರುಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಸ್ಥಳೀಯ ಭಾಗದ ಶಾಲಾ ಹಿತೈಷಿಗಳು,ಶಾಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು