7:55 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಂಜನಗೂಡು: ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

24/02/2024, 21:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆಇಂದು ಹುಣ್ಣಿಮೆ ಪ್ರಯುಕ್ತ ಭಕ್ತ ಸಾಗರವೇ ಹರಿದು ಬಂದಿದೆ.
ಸಾವಿರಾರು ಸಂಖ್ಯೆಯ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.


ಹುಣ್ಣಿಮೆ ಪ್ರಯುಕ್ತ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್‌ ನೇತೃತ್ವದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ಫಲಪಂಚಾಮೃತಾಭಿಷೇಕ, ಕ್ಷೀರ, ಎಳನೀರು ಹಾಗೂ ಗಂಗಾ ಜಲದ ಅಭಿಷೇಕಗಳನ್ನು ನೆರವೇರಿಸಿ ಬಗೆಬಗೆಯ ಪುಷ್ಪಗಳಿಂದ ಶ್ರೀ ನಂಜುಂಡೇಶ್ವರ ಸ್ವಾಮಿಯನ್ನು ಅಲಂಕೃತಗೊಳಿಸಿ ನಂತರ ಮಹಾಮಂಗಳಾರತಿಯೊಂದಿಗೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ವಿವಿಧೆಡೆಯಿಂದ ಬಂದ ಸಾವಿರಾರು ಭಕ್ತರು ಇಂದು ಬೆಳಿಗ್ಗೆಯಿಂದಲೇ ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ಉರುಳು ಸೇವೆ, ಧೂಪ ದೀಪದ ಸೇವೆ, ತುಲಾಭಾರ ಸೇವೆ ಮಾಡಿ ಭಕ್ತಿ ಭಾವ ಮೆರೆದು
ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದಾರೆ. ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು