12:35 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

26/02/2024, 18:16

ಮಂಗಳೂರು(reporterkarnataka.com): ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನವನ್ನು ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತಾಡುತ್ತಿದ್ದರು.
ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ ತ್ಯಾಗ ಮಾಡಿರುವವರು ಮುಸ್ಲಿಮರು. ಆದರೆ ಇಂದು ಆ ಸತ್ಯವನ್ನು ಮರೆಮಾಚಲಾಗುತ್ತಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿಯನ್ನು ಗಲ್ಲಿಗೇರಿಸುವಾಗ ಮಝಫರ್ ನಗರದ ಹಬೀಬಾರನ್ನು ಕೂಡಾ ಗಲ್ಲಿಗೇರಿಸಲಾಗಿದೆ. ಅಸ್ಗರಿ‌ ಬೇಗಂ ಅವರನ್ನು ಕೂಡಾ ಬೆಂಕಿಗೆ ಹಾಕಿ ಕೊಲ್ಲಲಾಗಿದೆ. ಆದರೆ ಉತ್ತರ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನೇ ಅಳಿಸಲಾಗುತ್ತಿದೆ ಎಂದರು.
ಕಥೆಗಾರ್ತಿ ಸುಧಾ ಆಡುಕಳ ಕೃತಿಯನ್ನು ಪರಿಚಯಿಸಿದರು. ಕವಯಿತ್ರಿ ಫಾತಿಮಾ ರಲಿಯಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೇಖಕಿ ಉಮೈರತ್ ಕುಮೇರು ಸ್ವಾಗತಿಸಿದರು. ಕವಿ ವಿಲ್ಸನ್ ಕಟೀಲ್ ಮುಖ್ಯ ಅತಿಥಿಗಳಾಗಿದ್ದರು, ಪತ್ರಕರ್ತ ಮುಆದ್ ಜಿ.ಎಂ ಕವನ ವಾಚಿಸಿದರು. ಎಚ್.ಎಂ ಪೆರ್ನಾಳ್ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು