8:03 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ನಂಜನಗೂಡು: ಸಾಹಿತಿ ಕಳಲೆ ಜವರ ನಾಯಕ ಅವರ ‘ಮುತ್ತಿನ ಕಣಜ’ ಕೃತಿ ಲೋಕಾರ್ಪಣೆ

26/02/2024, 21:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಏಳು ಮಳೆ ಪ್ರಕಾಶನ ಕಳಲೆ ಹಾಗೂ ಅನುರಾಗ ಸೇವಾ ಟ್ರಸ್ಟ್ ನಂಜನಗೂಡು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಕಳಲೆ ಜವರ ನಾಯಕ ಅವರು ಬರೆದಿರುವ ಮುತ್ತಿನ ಕಣಜ ಹಾಗೂ ಜನರಲ್ ಇಂಗ್ಲಿಷ್ ಸ್ಪರ್ಧಾತ್ಮಕ ಕೈಪಿಡಿ ಕೃತಿಗಳ ಬಿಡುಗಡೆ ಸಮಾರಂಭವನ್ನು ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಮತ್ತು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರೂ ಆದ ಚಿಕ್ಕರಂಗನಾಯಕ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜ್ ಕೃತಿಗಳನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ವಹಿಸಿದ್ದರು.
ಇದೇ ಸಂದರ್ಭ ಪ್ರತಿಭಾವಂತ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಮತ್ತು ಸಾಹಿತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ನಂತರ ಕಾರ್ಯಕ್ರಮ ಉದ್ಘಾಟನೆ ಮಾಡಿದ ಚಿತ್ರರಂಗನಾಯಕ, ಕೃತಿಗಳ ಲೋಕಾರ್ಪಣೆ ಮಾಡಿದ ಎಸ್ಸಿ ಬಸವರಾಜ್ ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಮಹದೇವಯ್ಯ ಅವರು ಮಾತನಾಡಿ
ಸಾಹಿತಿ ಕಳಲೆ ಜವರನಾಯಕ ಅವರು ಸರಳ ಸಜ್ಜನಿಕೆಯ ಹಾಗೂ ಎಲೆಮರೆ ಕಾಯಿಯಂತೆ ಹಲವಾರು ಕೃತಿಗಳನ್ನು ರಚಿಸಿ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇವರ ಕೃತಿಗಳ ಬಿಡುಗಡೆ ಕಾರ್ಯಕ್ರಮವು ಕೇವಲ ನಂಜನಗೂಡಿಗೆ ಸೀಮಿತವಾಗದೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ನಡೆದು ಗುರುತಿಸುವಂತಾಗಬೇಕು. ಬಡತನದಲ್ಲಿ ಹುಟ್ಟಿ ಬಡತನದಲ್ಲೆ ಜೀವನ ಸಾಗಿಸುತ್ತಿರುವ ಇವರು ತಮ್ಮ ನಿಸ್ವಾರ್ಥ ಜೀವನದಲ್ಲಿ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಹಲವರು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸಾಹಿತಿಗಳಾದ ದೇವನೂರು ಡಾ,ಮಹೇಂದ್ರ ಮೂರ್ತಿ, ಅನುರಾಗ ಸೇವಾ ಟ್ರಸ್ಟ್ ಅಧ್ಯಕ್ಷರಾದ ಸೋಮಶೇಖರ ಮೂರ್ತಿ, ಕರುನಾಡ ಕನ್ನಡ ಕಲಾಸಿರಿ ಬಳಗದ ರಾಜ್ಯಾಧ್ಯಕ್ಷ ಡಾ. ಅಂಬರೀಶ್, ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಕ್ಯಾತನಳ್ಳಿ ಪ್ರಕಾಶ್. ಕಳಲೆ ಜಯರಾಮ್, ಉದ್ಯಮಿ ಬಾಬು ನಾಯಕ್ ನರಸಿಂಹಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು