11:34 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ

28/02/2024, 10:26

ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ.
ಮೃತ ಬಾಲಕರನ್ನು ಅಗರಮೇಲು ನಿವಾಸಿ ಯಶ್ವಿತ್, ಹಳೆಯಂಗಡಿಯ ರಾಘವೇಂದ್ರ, ಚಿತ್ರಾಪುರದ ಅನ್ವಿತ್, ಗುಡ್ಡೆಕೊಪ್ಲದ ನಿರೂಪ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪೂರ್ವಭಾವಿ ಪರೀಕ್ಷೆ ಮುಗಿದಿದ್ದು ಬಳಿಕ ಯಶ್ವಿತ್, ರಾಘವೇಂದ್ರ, ಅನ್ವಿತ್ ಹಾಗೂ ನಿರೂಪ್ ನಾಪತ್ತೆ ಯಾಗಿದ್ದರು.
ಹಳೆಯಂಗಡಿ ಕರಿತೋಟದಲ್ಲಿ‌ ನಂದಿನಿ ನದಿಯಲ್ಲಿ ಈಜಾಡಲು ಹೋಗಿ ನಾಲ್ವರು ವಿದ್ಯಾರ್ಥಿಗಳು ಅಸುನೀಗಿದ್ದಾರೆ. ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಶಾಲೆ ಮತ್ತು ಬಸ್ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸುರತ್ಕಲ್ ಬಸ್‌ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್‌ ನಿಲ್ದಾಣದಲ್ಲಿ ಇಳಿದಿರುವುದನ್ನು ಖಚಿತಪಡಿಸಿಕೊಂಡಿದ್ದರು. ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್‌ ಟವ‌ರ್ ಲೊಕೇಶನ್‌ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದು ಗಮನಕ್ಕೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ, ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ.
ಸಂಶಯದಿಂದ ಸ್ಥಳೀಯರ ಸಹಕಾರದಿಂದ ನದಿಯಲ್ಲಿ ಹುಡುಕಾಡಿದಾಗ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು