4:27 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಎನ್. ಎಸ್. ಪತ್ತಾರ್ ಅವರಿಂದ ‘ಸಬ್‌ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ

28/02/2024, 20:15

ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.
ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸುತ್ತದೆ. ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಅವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಉದ್ಘಾಟನಾ ಸಮಾರಂಭವು ಮಾರ್ಚ್ 1, 2024 ರಂದು ಸಂಜೆ 5 ಗಂಟೆಗೆ, ಗ್ಯಾಲರಿ ಆರ್ಕಿಡ್, ಹೇಮಾವತಿ ಕಟ್ಟಡ, ಬಲ್ಮಠ, ಮಂಗಳೂರು ಇಲ್ಲಿ ನಡೆಯಲಿದೆ.
ಆರ್ಕಿಟೆಕ್ಟ್ ಗುಲ್ಶನ್ ರೊಯ್, ಪ್ರದರ್ಶನವನ್ನು ಉದ್ಘಾಟಿಸಲಿರುವರು. ಮಹಾಲಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಾಬುರಾವ್, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರದರ್ಶನದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6ರ ವರೆಗೆ ಗ್ಯಾಲರಿ ತೆರೆದಿರುವುದೆಂದು ಗ್ಯಾಲರಿ ಆರ್ಕಿಡ್ ನಿರ್ದೇಶಕರಾದ ವಿಲಿಯಮ್ ಪಾಯ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು