3:43 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನಂಜನಗೂಡು: ಅಲಮೇಲ ಅಮ್ಮ, ವೆಂಕಟರಮಣ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ

29/02/2024, 18:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಅಮ್ಮನವರ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಎರಡನೇ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀದೇವಿ ಹಾಗೂ ಭೂದೇವಿ ಸಮೇತರಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗಿತ್ತು. ಹುಲ್ಲಹಳ್ಳಿ ಸೇರಿದಂತೆ ತಾಲೂಕಿನ ವಿವಿಧಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಶ್ರೀ ವೆಂಕಟರಮಣ ಸ್ವಾಮಿ, ಶ್ರೀ ಅಲಮೇಲು ಮಂಗಮ್ಮ, ಗಣಪತಿ ಹಾಗೂ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಂದ ಎಲ್ಲ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ಹಾಗೂ ಲಾಡು ವಿತರಣೆ ಮಾಡಲಾಯಿತು.
ಇದೇ ಸಂದರ್ಭ ನಂಜನಗೂಡಿನ ಚಿನ್ಮಯಿ ಶ್ರೀವಾರಿ ಭಜನಾ ಮಂಡಳಿಯವರು ನಡೆಸಿಕೊಟ್ಟ ಭಜನೆ ಹಾಗೂ ಉಷಾ ವೇಣುಗೋಪಾಲ್ ರವರ ನೂಪುರ ನೃತ್ಯಾಂಜಲಿ ತಂಡದ ಮಕ್ಕಳು ನಡೆಸಿಕೊಟ್ಟ ಭರತನಾಟ್ಯದ ನೃತ್ಯ ರೂಪಕಗಳು ನೋಡುಗರ ಮನಸೂರೆಗೊಂಡವು.
ಬಳಿಕ ಭಜನಾ ಮಂಡಳಿ ಹಾಗೂ ನೃತ್ಯ ತಂಡದವರಿಗೆ ದೇವಾಲಯದ ನಿರ್ಮಾತೃಗಳಾದ ವಿಜಯಲಕ್ಷ್ಮಿನಾರಾಯಣ್ ರೆಡ್ಡಿ ಕುಟುಂಬದವರಿಂದ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು