12:12 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ನಾಗಮಂಗಲ: ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ

11/08/2021, 20:09

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಂಡು ಹಸಿರು ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬರಲ್ಲೂ ಮೈಗೂಡಿಸಿಕೊಳ್ಳಬೇಕೆಂದು ನೆಹರು ಯುವ ಕೇಂದ್ರದ ಸ್ವಯಂಸೇವಕಿ ಮಹಾಲಕ್ಷ್ಮಿ ಹೇಳಿದರು.

ಅವರಿಂದ ನಾಗಮಂಗಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆವರಣದಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬ ನಾಗರಿಕರು ಮೈಗೂಡಿಸಿಕೊಳ್ಳಬೇಕು.ಸ್ವಚ್ಛತೆಯ ಅರಿವು ಮೂಡಿಸಿ ಪರಿಸರ ಸಂರಕ್ಷಿಸಬೇಕೆಂದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಸಸಿ ನೆಡುವ ಮುಖಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಮಹಾದೇವಪ್ಪನವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಣ್ಣಗೌಡರು ಬೋಧಿಸಿದರು. ಶಿಕ್ಷಕರಾದ ಶಿವಣ್ಣ, ಮಂಜುನಾಥ್ , ಗಿರೀಶ್, ನಾಗರಾಜ್ ಹಾಗೂ ಅಂಗನವಾಡಿ ಕಾರ್ಯಕರ್ತರಾದ ಭವ್ಯ, ಕಮಲಮ್ಮ ಅನೇಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು