3:04 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ವಿಶ್ವಶಾಂತಿ, ಸಾಮರಸ್ಯದ ಬದುಕಿಗೆ ಜೈನ ಧರ್ಮ ಕೊಡುಗೆ ಅಪಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

02/03/2024, 13:45

ವೇಣೂರು(reporterkarnataka.com): ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮರಸ್ಯದ ಬದುಕಿಗೆ ಜೈನ‌ಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಅವರು ಶುಕ್ರವಾರ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.
ತ್ಯಾಗ, ಸಹನೆಯ ಪ್ರತೀಕವಾಗಿ ಜೈನ ಧರ್ಮವು ಜಗತ್ತಿನಲ್ಲಿ ಅಹಿಂಸೆಯ ಸಂದೇಶ ಹರಡಿದೆ. ಕರ್ನಾಟಕದಲ್ಲಿ ಶ್ರವಣಬೆಳಗೊಳ, ಧರ್ಮಸ್ಥಳ, ಕಾರ್ಕಳ, ವೇಣೂರಿನಲ್ಲಿರುವ ಬಾಹುಬಲಿ ರಾಜ್ಯದ ಶ್ರೀಮಂತ ಸಂಸ್ಕೃತಿ, ಧಾರ್ಮಿಕತೆಯ ಸಂಕೇತವಾಗಿದೆ. ಚಿಕ್ಕಂದಿನಿಂದಲೂ ತಾನು ಹಲವಾರು ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೀವನದ ಪುಣ್ಯವಾಗಿದೆ ಎಂದು ಅವರು ಹೇಳಿದರು.
ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ರಸ್ತೆ ಸೇರಿದಂತೆ ಎಲ್ಲ ಅಗತ್ಯ ಮೂಲಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಮಸ್ತಕಾಭಿಷೇಕಕ್ಕೆ ಅನುದಾನವನ್ನು ನೀಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಪ್ರತಾಪ ಸಿಂಹ ನಾಯಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಇದ್ದರು.
ಸಚಿವರು ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮ ವೀಕ್ಷಿಸಿದರು. ನಂತರ ಮಸ್ತಕಾಭಿಷೇಕ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿರುವ ರಾಜ್ಯ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತುಪ್ರದರ್ಶನವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು