11:09 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಂಗಳೂರಿನ‌ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ

02/03/2024, 17:11

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ವರ್ಷದ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು