7:25 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದ. ಕ. ಮತ್ತು ಉಡುಪಿ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ – ‘ಹೊಂಬೆಳಕು -2024 ಉದ್ಘಾಟನೆ

02/03/2024, 22:17

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಗ್ರಾಮ ಸ್ವರಾಜ್ ಪ್ರತಿಷ್ಠಾನ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿ ಹಾಗೂ ಪಂಚಾಯತ್ ಸಿಬ್ಬಂದಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ – ‘ಹೊಂಬೆಳಕು -2024’ ಸ್ಥಳೀಯಾಡಳಿತದ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.


ಕಾರ್ಯಕ್ತಮ ಉದ್ಘಾಟಿಸಿ ಮಾತನಾಡಿದ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್,ಹೊಂಬೆಳಕು ಕಾರ್ಯಕ್ರಮದ ಮೂಲಕ ಎಲ್ಲಾ ಸದಸ್ಯ ಮಿತ್ರರಿಗೆ ಪ್ರೋತ್ಸಾಹ, ಆತ್ಮವಿಶ್ವಾಸ, ಧೈರ್ಯ ತುಂಬುವ ಕೆಲಸವಾಗಿದೆ. ರಾಜ್ಯದ, ದೇಶದ ಅಭಿವೃದ್ದಿಗೆ ಕಾಣದ ಕೈಗಳಾಗಿ ದುಡಿಯುವ ಮತ್ತು ತಮ್ಮದೇ ಆದ ಪ್ರಾಮಾಣಿಕ ಕೊಡುಗೆ ನೀಡುತ್ತಿದ್ದೀರಿ ಎಂದು ಹೇಳಿದರು.
ಸರ್ಕಾರದ ಕೆಲಸ ಕಾರ್ಯಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕಾರ್ಯ ಗ್ರಾಮ ಪಂಚಾಯತ್ ಸದಸ್ಯರಿಂದ ನಡೆಯುತ್ತದೆ. ನಾವೆಲ್ಲರೂ ಜತೆ ಜತೆಯಾಗಿ ಕೆಲಸ ಮಾಡುವ, ಹಾಗೆಯೇ ಗೆಲುವು ಮತ್ತು ಸೋಲು ಇದ್ದದ್ದೇ ನಾವು ಅದನ್ನು ಸ್ವೀಕರಿಸಿ ಮುನ್ನಡೆಯ ಬೇಕಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಂಚಾಯತ್ ಸದಸ್ಯರನ್ನು ಸೇರಿಸಿದಾಗ ಒಂದು ಕುಟುಂಬದ ಬಾಂಧವ್ಯದ ಜತೆ ಕ್ರೀಡೆಯಲ್ಲಿ ಭಾಗಿಯಾಗುವದ್ದರಿಂದ ಸ್ನೇಹದ ವಾತಾವರಣ ನಿರ್ಮಾಣವಾಗುತ್ತದೆ.


ರಾಜಕೀಯ ಏನೇ ಇದ್ದರೂ ಕೂಡ ಅಂತಿಮವಾಗಿ ಜನ ಸೇವೆ ಮಾಡುವುದೇ ಮುಖ್ಯವಾಗಿದೆ. ಚುನಾವಣೆ ಇದ್ದಾಗ ಮಾತ್ರ ರಾಜಕಾರಣ ಮಾಡುವ ಉಳಿದ ಸಮಯ ಅಭಿವೃದ್ದಿ ಬಗ್ಗೆ ಚಿಂತಿಸಿ ಕೆಲಸ ಮಾಡಬೇಕಾದರೆ ನಮ್ಮ ನಡುವೆ ಸ್ನೇಹಪರವಾದ ವಾತಾವರಣ ನಿರ್ಮಾಣವಾಗಲು ಕ್ರೀಡೆ ಸಹಕಾರಿಯಾಗಿದೆ. ಹಳೆಯ ಸಂಸ್ಕೃತಿಗಳೊಂದಿಗೆ ಹೊಸತನದೊಂದಿಗೆ ಕೆಲಸ ಕಾರ್ಯಗಳನ್ನು ಮಾಡುವ ಎಂದರು.









ಈ ಸಂದರ್ಭ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಟ್ರಸ್ಟ್‌ನ ಉದ್ಘಾಟನ ಕಾರ್ಯಕ್ರಮ ನಡೆಯಿತು. ಹೆಚ್ಚು ಬಾರಿ ಚುನಾಯಿತರಾದ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ , ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವರಾದ ನರೇಂದ್ರ ಸ್ವಾಮಿ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ರಕ್ಷಿತ್ ಶಿವರಾಮ್, ಎ.ಸಿ. ವಿನಯ್ ರಾಜ್, ಪಾಲಿಕೆ ಆಯುಕ್ತ ಆನಂದ್, ಹೆಚ್ಚವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಾಳ ನಾರಾಯಣ ರಾವ್, ಹರ್ಷವರ್ಧನ್, ಬಲರಾಜ್, ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್‌ಚಂದ್ರ ಶೆಟ್ಟಿ ಕುಳಾಲು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು