3:51 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು