10:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು

05/03/2024, 15:33

*ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂದು ಬೆಳಗ್ಗೆ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದಾಗ ರೈಲು ಬರುವುದನ್ನು ಗಮನಿಸದೇ ಮೈ ಮರೆತು ಚಲಿಸುತ್ತಿದ್ದ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಮನು ಕುಮಾರ್ 27 ವರ್ಷದ ಮೃತ ವ್ಯಕ್ತಿಯಾಗಿ ಎಂದು ತಿಳಿದು ಬಂದಿದೆ.


ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕೆಲವು ವರ್ಷಗಳಿಂದ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.
ಬೆಳಂ ಬೆಳಗ್ಗೆ ಬಯಲು ಶೌಚಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಬಿಹಾರದಲ್ಲಿದ್ದ ತನ್ನ ಪತ್ನಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮಾತನಾಡಿಕೊಂಡು ರೈಲ್ವೆ ಟ್ರ್ಯಾಕ್ ದಾಟುತ್ತಿರುವ ಸಂದರ್ಭದಲ್ಲಿ ಚಾಮರಾಜನಗರ ಕಡೆಯಿಂದ ಮೈಸೂರುಗೆ ತೆರಳುತ್ತಿದ್ದ ರೈಲು ಆಕಸ್ಮಿಕವಾಗಿ ತಾಕಿದ ಪರಿಣಾಮ ಬಿಹಾರ ಮೂಲದ ಕಾರ್ಮಿಕ ಸ್ಥಳದಲ್ಲೆ ಸಾವನಪ್ಪಿದ್ದಾರೆ.
ರೈಲು ಬರುತ್ತಿರುವುದನ್ನು ಕಾಣದೆ ಮೈ ಮರೆತ ಪರಿಣಾಮ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ್, ಕುಮಾರ್, ಭೇಟಿ ನೀಡಿ, ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು