11:45 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಅಲರ್ಟ್

05/03/2024, 16:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ದೇವಿರಮ್ಮನಹಳ್ಳಿ ವೃತ್ತದ ಬಳಿ ಬಿಜೆಪಿ ಪಕ್ಷದ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ತಿರಂಗ ಯಾತ್ರೆಗೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಾಯಕರು ದೇಶವನ್ನು ಇಬ್ಬಾಗ ಮಾಡುವ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಸಂಸದ ಡಿ.ಕೆ. ಸುರೇಶ್ ಅವರು ಸಾಕಷ್ಟು ದೇಶವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ. ರಾಜ್ಯದ ಶಕ್ತಿ ಕೇಂದ್ರ ಎನಿಸಿಕೊಂಡಿರುವ ವಿಧಾನಸೌಧದ ಮುಂಭಾಗದಲ್ಲಿ ಶತ್ರು ದೇಶ ಎನಿಸಿಕೊಂಡಿರುವ ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ರೀತಿ ಕ್ರಮವನ್ನು ಕೈಗೊಂಡಿಲ್ಲ. ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಆದಾಗನಿಂದಲೂ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಯುವಕರು ಮೋದಿಯವರ ಕೈಯನ್ನು ಬಲಪಡಿಸಬೇಕು ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಒಲೈಕೆ ಮಾಡುವುದನ್ನು ಬಿಡಬೇಕು. ಈ ನಡೆಯನ್ನು ನಾವು ಖಂಡಿಸುತ್ತೇವೆ ಮುಂಬರುವ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗಿದ್ದೇವೆ ಮತ್ತೆ ಈ ದೇಶದಲ್ಲಿ ನರೇಂದ್ರ ಮೋದಿಯವರನ್ನೇ ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ನಂಜನಗೂಡಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ, ಯುವ ಮೋರ್ಚಾದ ಅಧ್ಯಕ್ಷ ಸಾಮ್ರಾಟ್, ನಗರಾಧ್ಯಕ್ಷ ಸಿದ್ದರಾಜು, ಬಿಜೆಪಿ ಮಾಧ್ಯಮ ವಕ್ತಾರ ಶ್ರೀನಿವಾಸ ರೆಡ್ಡಿ, ಮಹೇಶ್, ಉಮೇಶ್ ಮೋದಿ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು