8:07 AM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಮೆಟಾ ಸರ್ವರ್ ಸಮಸ್ಯೆ: ಭಾರತ ಸೇರಿ ಹಲವು ದೇಶಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಥ್ರೆಡ್ಸ್ ಅಕೌಂಟ್ ಲಾಗ್ ಔಟ್!

05/03/2024, 21:58

ಮುಂಬೈ(reporterkarnataka.com): ಮೆಟಾ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು,ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಥ್ರೆಡ್ಸ್ ಬಳಕೆದಾರರಿಗೆ ಏಕಾಏಕಿಯಾಗಿ ತಾಂತ್ರಿಕ ಸಮಸ್ಯೆ ಎದುರಾಗಿದೆ.
ಫೇಸ್‌ಬುಕ್ , ಮೆಸೇಂಜರ್, ಇನ್‌ಸ್ಟಾಗ್ರಾಂ ಬಳಕೆದಾರರು ಇದೀಗ ಲಾಗಿನ್ ಸಮಸ್ಯೆಯಿಂದ ಪರದಾಡುತ್ತಿದ್ದಾರೆ.
ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಥ್ರೆಡ್ಸ್ ಲಾಗ್ ಔಟ್ ಆಗಿದೆ. ಬಳಿಕ ಹೊಸ ಪಾಸ್‌ವರ್ಡ್ ಸಹಿತ ಏನೇ ಮಾಡಿದರೂ ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಭಾರತ ಮಾತ್ರವಲ್ಲ ವಿಶ್ವದ
ಹಲವು ದೇಶಗಳಲ್ಲಿ ಮೆಟಾ ಸೇವೆ ತಾತ್ಕಾಲಿಕ ಸ್ಥಗಿತಗೊಂಡಿದೆ. ಡೌನ್ ಡಿಟೆಕ್ಟರ್ ಡಾಟ್ ಕಾಮ್ ತಾಂತ್ರಿಕ ಸಮಸ್ಯೆ ಕುರಿತು ಮಾಹಿತಿ ನೀಡಿದೆ. ಮೆಟಾದ ಕೆಲ ಸೇವೆಗಳು ಸ್ಥಗಿತಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಬಳಕೆದಾರರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಅನ್ನೋ ಮಾಹಿತಿಯನ್ನು ನೀಡಿದೆ. ಟ್ವಿಟರ್‌ನಲ್ಲಿ ಈ ಕುರಿತು ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
300,000 ಕ್ಕೂ ಹೆಚ್ಚು ಬಳಕೆದಾರರು ಫೇಸ್‌ಬುಕ್ ಸಮಸ್ಯೆ ಕುರಿತು ಅಸಮಾಧಾನ ತೋಡಿಕೊಂಡಿದ್ದಾರೆ. 20,000ಕ್ಕೂ ಹೆಚ್ಚು ಬಳಕೆದಾರರು ಇನ್‌ಸ್ಟಾಗ್ರಾಂ ಸಮಸ್ಯೆ ಕುರಿತುದೂರು ನೀಡಿದ್ದಾರೆ. ಮಾರ್ಚ್ 5ರಂದು ಮೆಟಾದ ಫೇಸ್‌ಬುಕ್ ಸೇರಿದಂತೆ ಇತರ ಕೆಲ ಸೇವೆಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ ಅನ್ನೋದನ್ನು ಡೌನ್‌ಡಿಟೆಕ್ಟರ್ ಹೇಳಿದೆ.
ಫೇಸ್‌ಬುಕ್ ಡೌನ್ ಕುರಿತು ಮೆಟಾ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು