1:18 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡು: 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ

07/03/2024, 11:15

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ನಂಜನಗೂಡು ನಗರದ ಪ್ರಥಮ ದರ್ಜೆ ಕಾಲೇಜಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಸುಮಾರು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಬೋಧನಾ ಕೊಠಡಿಗಳು ಒಂದು ಮಹಿಳಾ ಪ್ರಾಧ್ಯಾಪಕರ ಕೊಠಡಿ, ಎರಡು ಸುಸಜ್ಜಿತ ಶೌಚಾಲಯಗಳು, ಒಂದು ಸ್ಟೋರ್ ರೂಮ್ ಸೇರಿದಂತೆ ನೂತನ ಕಟ್ಟಡಗಳ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
9 ತಿಂಗಳ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬೆಂಗಳೂರಿನ ವಿನಾಯಕ ಕನ್ಸ್ಟ್ರಕ್ಷನ್ ರವರು ಗುತ್ತಿಗೆ ಪಡೆದಿದ್ದಾರೆ.


ಕಾಮಗಾರಿಗೆ ಚಾಲನೆ ನೀಡಲು ಬಂದ ಶಾಸಕರನ್ನು ಕಾಲೇಜು ಆಡಳಿತ ಮಂಡಳಿಯವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಭೂಮಿ ಪೂಜೆ ನೆರವೇರಿಸಿ ಶಾಸಕ ದರ್ಶನ್ ದ್ರುವನಾರಾಯಣ್ ಮಾತನಾಡಿ ಕಾಮಗಾರಿಯ ಬಗ್ಗೆ ವಿವರಿಸಿ 9 ತಿಂಗಳ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಾಕೀತುಮಾಡಿ ಈ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರೇಣುಕಾ ಬಾಯಿ, ಅಧ್ಯಾಪಕ ವರ್ಗದವರು, ನಗರಸಭಾ ಸದಸ್ಯರುಗಳು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು