4:29 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಈ ವಾರಂತ್ಯದಲ್ಲೂ ಇದೆ ವೀಕೆಂಡ್ ಕರ್ಫ್ಯೂ; ದ.ಕ. ಜಿಲ್ಲೆಯಲ್ಲಿ ಶಾಲೆ ಕಾಲೇಜು ಆರಂಭ ಮತ್ತೆ ವಿಳಂಬ ?

12/08/2021, 08:48

ಮಂಗಳೂರು(reporterkarnataka.com); ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಪರೀಕ್ಷೆಗೆ ತೆರಳುವವರು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಬಹುದು ಎಂದು ಅವರು ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಶಾಲೆ- ಕಾಲೇಜು ಆರಂಭ ವಿಳಂಬವಾಗುವ ಸಾಧ್ಯತೆ. ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜು ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ.  ಸೇರಿದಂತೆ  ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ದ.ಕ. ಜಿಲ್ಲಾಸ್ಪತ್ರೆಯಾದ ವೆನ್‌ಲಾಕ್‌ನಲ್ಲಿ 32 ಬೆಡ್‌ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಜಿಲ್ಲೆಗೆ ಗುರುವಾರ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆ.15ರಿಂದ ಮತ್ತೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ರಾಜ್ಯದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ತಪಾಸಣಾ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಒಂದು ದಿನದಲ್ಲಿ 9900 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ  ಮತ್ತೆ ಲಾಕ್‌ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು