9:15 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ನಂಜನಗೂಡು: ಮಾಜಿ ಸಂಸದ, ದಿವಂಗತ ಧ್ರುವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

09/03/2024, 20:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದೇಶದ ಉತ್ತಮ ಸಂಸದ ಪಟು ಎಂದೆ ಖ್ಯಾತಿ ಪಡೆದಿದ್ದ ಮಾಜಿ ಸಂಸದ ದ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಂಜನಗೂಡಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ತಿಳಿಸಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಧ್ರುವನಾರಾಯಣ್ ಅವರು ಕಾಲವಾಗಿ ಒಂದು ವರ್ಷ ಕಳೆದ ಹಿನ್ನೆಲೆ ಅವರ ಸ್ಮರಣಾರ್ಥ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಮೈಸೂರು, ದೃವನಾರಾಯಣ್ ಅಭಿಮಾನಿ ಬಳಗ ನಂಜನಗೂಡು, ಲಯನ್ಸ್ ಸಂಸ್ಥೆ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆ ಕೊಯಮತ್ತೂರು ಇವರ ಸಯುಕ್ತ ಆಶ್ರಯದಲ್ಲಿ ಉಚಿತ ಬೃಹತ್ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.
ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ಎಲ್ಲಾ ಕಾಯಿಲೆಗಳನ್ನು ಪರೀಕ್ಷಿಸಿ ಅಗತ್ಯವಿದ್ದಲ್ಲಿ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾಜಿ ಶಾಸಕ ಕಳೆದೆ ಕೇಶವಮೂರ್ತಿ ಕೆಪಿಸಿಸಿ ಕಾರ್ಯದರ್ಶಿಗಳಾದ ಶ್ರೀಕಂಠ ಮತ್ತು ಕಾವೇರಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಲಯನ್ ಸಂಸ್ಥೆ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯದರ್ಶಿ ನಾಗರಾಜ್ ಖಜಾಂಚಿ ಉಮೇಶ್ ಮುಖಂಡರುಗಳಾದ ಶ್ರೀನಿವಾಸ ಮೂರ್ತಿ ವಿಜಯ್ ಕುಮಾರ್ ನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು