3:21 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಹಾ ಶಿವರಾತ್ರಿ; ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಹಾಗೂ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ಸಂಭ್ರಮದ ಆಚರಣೆ

09/03/2024, 20:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಹಾಗೂ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಯು ಸಡಗರ ಸಂಭ್ರಮದಿಂದ ನೆರವೇರಿತು.


ಹಿಂದುಗಳ ಪವಿತ್ರ ಹಬ್ಬ ಮಹಾಶಿವರಾತ್ರಿ ಪ್ರಯುಕ್ತ ದೇವಾಲಯವನ್ನು ಬಣ್ಣ ಬಣ್ಣದ ಹೂವು ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು. ಹೂಗಳಿಂದ ಅಲಂಕರಿಸಲಾದ ಲಿಂಗ ರೂಪಿ ಶ್ರೀ ಸೋಮೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಳಲೆಯೂ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದು ತಮ್ಮ ಭಕ್ತಿ ನಮನ ಸಲ್ಲಿಸಿದರು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ನೀಡಲಾಯಿತು.
ದೇವಾಲಯದ ಪಾರುಪತ್ತೆಗಾರ ಜಯರಾಮ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿ
ಕಳಲೆಯ ಪುರಾತನ ಸೋಮೇಶ್ವರ ದೇವಾಲಯವು ಶಿಥಿಲಗೊಂಡಿದ್ದು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದರ ಉಳಿವಿಗೆ ಮುಂದಾಗಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು