12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷ ಹಲ್ಲೆ; ಪಾಪಿ ಸೊಸೆಯ ಬಂಧನ

12/03/2024, 17:30

ಮಂಗಳೂರು(reporterkarnataka.com): ನಗರದ ಕುಲಶೇಖರ ಸಮೀಪ ವೃದ್ಧ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷವಾಗಿ ದೈಹಿಕ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


ಅತ್ತಾವರ ಮೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯಾಗಿರುವ
ಉಮಾಶಂಕರಿ ಎಂಬವರು ಬಂಧಿತ ಮಹಿಳೆ. ನಾದಿನಿ ಪ್ರಿಯಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ ಅವರ ಪತಿ ವಿದೇಶದಲ್ಲಿ ನೌಕರಿಯಲ್ಲಿದ್ದು, ಮನೆಯಲ್ಲಿ ನಡೆಯುವ ಘಟನೆಯನ್ನು ಸಿಸಿ ಕ್ಯಾಮೆರಾ ಮೂಲಕ ಮೊಬೈಲ್ ನಲ್ಲಿ ನೋಡುತ್ತಿದ್ದರು. ತನ್ನ ಪತ್ನಿ ಅಪ್ಪನ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಕಂಡು ನೊಂದ ಪತಿ, ತನ್ನ ತಂಗಿಯಲ್ಲಿ ಉಮಾಶಂಕರಿ ವಿರುದ್ಧ ದೂರು ನೀಡುವಂತೆ ಸೂಚನೆ ನೀಡಿದ್ದರು.
ಮಾವನ ಮೇಲೆ ಸೊಸೆ ನಡೆಸಿದ ಹಲ್ಲೆಯ ಸಿಸಿ ಕ್ಯಾಮೆರಾ ಪೂಟೇಜ್ ನಿನ್ನೆಯೇ ಎಲ್ಲೆಡೆ ವೈರಲ್ ಆಗಿತ್ತು. ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ
ಬುದ್ದಿವಂತರ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು