5:17 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

14/03/2024, 19:42

ಮಂಗಳೂರು(reporterkarnataka.com): ಹಿಂದುತ್ವ ಹಾಗೂ ಅಭಿವೃದ್ಧಿಯೇ ನನ್ನ ಆದ್ಯತೆ.
ಈ ಮೂಲಕ ಜಿಲ್ಲೆಯಲ್ಲಿ ಅಭಿವೃದ್ದಿಯ ಹೊಸ ಮಜಲನ್ನು ಸೃಷ್ಟಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಆದ ಬಳಿಕ ಕ್ಯಾಪ್ಚನ್ ಬ್ರಿಜೇಶ್ ಚೌಟ ಅವರು ಸಂಘದ ಕಾರ್ಯಾಲಯ ಸಂಘನಿಕೇತನಕ್ಕೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದರು. ನಂತರ ಕೆಪಿಟಿ ಬಳಿ ಇರುವ ಯುದ್ಧ ಸ್ಮಾರಕ ಕ್ಕೆ ಭೇಟಿ ನೀಡಿದರು. ಬಳಿಕ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತ ರೊಂದಿಗೆ ಮಾತನಾಡಿದರು.
ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಅವಕಾಶ ಮಾಡಿಕೊಟ್ಟದ್ದಕ್ಕೆ ಬಿಜೆಪಿ ವರಿಷ್ಠರಿಗೆ ಹಾಗೂ ನನ್ನ ನೆಚ್ಚಿನ ದೇವ ದುರ್ಲಭ ಕಾರ್ಯಕರ್ತರಿಗೆ ಆಭಾರಿ ಆಗಿದ್ದೇನೆ ಎಂದು ಕ್ಯಾಪ್ಟನ್ ಚೌಟ ಹೇಳಿದರು. ಪಕ್ಷದ
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷೆ ಪೂಜಾ ಪೈ, ಶಾಂತಿ ಪ್ರಸಾದ್ ಹೆಗ್ಡೆ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕೋಶಾಧಿಕಾರಿ ಸಂಜಯ ಪ್ರಭು, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಮಹೇಶ್ ಜೋಗಿ, ಕಿರಣ್ ಕುಮಾರ್, ವಸಂತ್ ಪೂಜಾರಿ, ಮನೊಹರ್ ಕದ್ರಿ, ಅರುಣ್ ಜಿ. ಶೇಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು