1:32 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲಾ ಕಮಲ ಪಾಳಯದಲ್ಲಿ ತೀವ್ರಗೊಂಡ ಭಿನ್ನಮತ: ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ

15/03/2024, 10:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಚಿಕ್ಕಮಗಳೂರು ಜಿಲ್ಲಾ
ಬಿಜೆಪಿಯಲ್ಲಿ ಉಂಟಾಗಿರುವ ಬಿರುಕು ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಮಂಡಲ ಅಧ್ಯಕ್ಷರ ಆಯ್ಕೆಯ ಸಂಬಂಧ ಪಕ್ಷದೊಳಗೆ ಉದ್ಭವಿಸಿರುವ ಗೊಂದಲ ಕೂಡ ಮುಂದುವರಿದಿದೆ. ಇದೀಗ ನಡೆಯಲಿರುವ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮೇಲೂ ಇದರ ಕರಿನೆರಳು ಬಿದ್ದಿದೆ.
ಮೂಡಿಗೆರೆ ಬಿಜೆಪಿ ಕಛೇರಿಯಲ್ಲಿ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿದೆ. ಈ ಸಮಾರಂಭಕ್ಕೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಭರ್ಜರಿ ತಯಾರಿಯನ್ನು ನಡೆಸಲಾಗಿದೆ. ಮಂಡಲ ಅಧ್ಯಕ್ಷರಾಗಿ ಟಿ.ಎಂ. ಗಜೇಂದ್ರ ಮತ್ತು ಅವರ ತಂಡದ ಸದಸ್ಯರು ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಇತ್ತ ಮಂಡಲ ಅಧ್ಯಕ್ಷರ ಆಯ್ಕೆಯ ವಿಚಾರವಾಗಿ ಮೂಡಿಗೆರೆ ತಾಪಂ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿತರಾಗಿರುವ ಬಣಕಲ್ ಹೋಬಳಿ ಬಿಜೆಪಿ ಅಧ್ಯಕ್ಷ ಪಿ.ಜಿ. ಅನುಕುಮಾರ್ ಪಟ್ಟದೂರು ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರುಗಳ ನೇತೃತ್ವದಲ್ಲಿ ಮೂಡಿಗೆರೆ ಪ್ರೀತಂ ಹಾಲ್ ನಲ್ಲಿ ಬಿಜೆಪಿ ಚಿಹ್ನೆಯಡಿಯೇ “ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾದ ಪ್ರಚಾರವನ್ನು ನೀಡಲಾಗುತ್ತಿದೆ. ಪಿ.ಜಿ. ಅನುಕುಮಾರ್ ಅವರು ಕೆ.ಸಿ. ರತನ್ ಅವರನ್ನು ಕುರಿತು ಮಾತನಾಡಿರುವ ಆಡಿಯೋ ಒಂದು ಸಹ ವ್ಯಾಪಕವಾಗಿ ಹರಿದಾಡುತ್ತಿದೆ. ನಾಳಿನ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದ ಹೆಸರಿನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೂ ಪಕ್ಷದ ಒಂದು ಗುಂಪು ಸಾಕಷ್ಟು ತಯಾರಿ ನಡೆಸಿದ್ದು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಪಕ್ಷದೊಳಗೆ ನಡೆಯುತ್ತಿರುವ ಈ ಘಟನಾವಳಿಗಳು ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಗೊಂದಲ ಮೂಡಿಸಿದೆ. ಯಾವ ಕಾರ್ಯಕ್ರಮಕ್ಕೆ ಹೋಗುವುದು ? ಎಂಬ ಇಕ್ಕಟ್ಟಿನಲ್ಲಿ ಕಾರ್ಯಕರ್ತರು ಸಿಲುಕಿರುವುದು ಅವರ ಭಾವನೆಗಳಿಂದ ತಿಳಿದುಬರುತ್ತಿದೆ. ಅತ್ತ ಹೋದರೆ ಇವರಿಗೆ ಸಿಟ್ಟು, ಇತ್ತ ಹೋದರೆ ಅವರಿಗೆ ಸಿಟ್ಟು ಎಂಬ ರೀತಿಯಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಏರ್ಪಟ್ಟಿದೆ.
ಒಟ್ಟಾರೆ ನಾಳೆ ಮೂಡಿಗೆರೆ ಬಿಜೆಪಿಯೊಳಗೆ ಎರಡು ಬಣಗಳು ಪರಸ್ಪರರು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು ಮತ್ತೊಂದು ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು