8:51 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ರಾಜ್ಯ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ

17/03/2024, 22:01

ಮಂಗಳೂರು(reporterkarnataka.com): ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆಯಾಗಿದ್ದಾರೆ.
1991ರಿಂದ ವಿದ್ಯಾರ್ಥಿ ಕಾಂಗ್ರೆಸ್ (ಎನ್ ಎಸ್ ಯುಐ)ನಲ್ಲಿ ಗುರುತಿಸಿಕೊಂಡು ಯು. ಟಿ. ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾವೂರಿನಲ್ಲಿ ಪರಿಚಯ ಕಲಾ ರಂಗ ಸಂಘವನ್ನು ಕಟ್ಟಿಕೊಂಡು ಮೊಸರು ಕುಡಿಕೆ ಉತ್ಸವವನ್ನು ಪ್ರಾರಂಭಿಸಿದರು. ಕಾವೂರು ವ್ಯವಸಾಯ ಸಹಕಾರಿ ಬ್ಯಾಂಕ್ ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕರ್ನಾಟಕ ಸರಕಾರ ಆಹಾರ ಆಯೋಗ ದಲ್ಲಿ ಸದಸ್ಯರಾಗಿ ಆಯ್ಕೆಯಾಗುದರೊಂದಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಜಿಲ್ಲೆಯಿಂದ ಮೊದಲ ಬಾರಿಗೆ ಕ್ಷತ್ರಿಯ ಸಮಾಜಕ್ಕೆ ಅವಕಾಶ ಸಿಕ್ಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು