2:13 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು