ಇತ್ತೀಚಿನ ಸುದ್ದಿ
ಕಡೂರು: ಕಂಬದಿಂದ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಮನೆ ಬೆಂಕಿಗಾಹುತಿ
19/03/2024, 15:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಕಂಬದಿಂದ ತುಂಡಾಗಿ ಮನೆ ಮೇಲೆ ಬಿದ್ದ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದೆ.
ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಿದ್ದಾಗ ಅವಘಡ ಸಂಭವಿಸಿದೆ. ಮನೆಯವರು ತೋಟಕ್ಕೆ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಿಯರು ಹಾಗೂ ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.