7:25 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿ- ಜೆಡಿಎಸ್ ಮೈತ್ರಿಕೂಟದಲ್ಲಿ ಅಸಮಾಧಾನ: ಸೀಟು ಹಂಚಿಕೆ ಬಗ್ಗೆ ತಕರಾರು; ಪ್ರಧಾನಿ ಸಭೆಗೆ ಆಹ್ವಾನ ನೀಡದಕ್ಕೆ ಆಕ್ರೋಶ

19/03/2024, 18:34

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಡುವೆ ಆರಂಭದಲ್ಲೇ ಅಸಮಾಧಾನ ಹೊಗೆಯಾಡಲು ಆರಂಭಿಸಿದೆ. ಬಿಜೆಪಿ ಮೈತ್ರಿ ಧರ್ಮ ಪಾಲಿಸುತ್ತಿಲ್ಲ ಎಂದು ಜೆಡಿಎಸ್ ಅಪಸ್ವರ ಎತ್ತಿದೆ. ರಾಜ್ಯದ ಪ್ರಧಾನಿ ಬಂದಾಗಲೂ ಜೆಡಿಎಸ್ ನ ಹಿರಿಯ ನಾಯಕರನ್ನು ಆಹ್ವಾನಿಸಿಲ್ಲ. ಕೇವಲ 2 ಸೀಟು ಮಾತ್ರ ಕೊಡುವ ಯೋಚನೆಯಲ್ಲಿ ಬಿಜೆಪಿ ಇದೆ ಎಂದು ಪಕ್ಷದ ಹಿರಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು, ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೆಗೌಡರು ಹಾಗೂ ಮಾಜಿ ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಜೆಡಿಎಸ್ ನ ಹಿರಿಯ ಮುಖಂಡರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ರಾಜ್ಯದ 20 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಜೆಡಿಎಸ್‌ ಮುಖಂಡರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿ ನಾಯಕರು ಕರೆಯುತ್ತಿಲ್ಲ. 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗಲೂ ಬಿಜೆಪಿ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಗೆ ಇದೆ. ಶೇ.3ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಎರಡು ಬಾರಿ ಬಂದು ಭಾಷಣ ಮಾಡಿಕೊಂಡು ಹೋಗಿದ್ದಾರೆ. ಆದರೆ ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.
ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂತಹ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಎಂದು ಪ್ರಶ್ನಿಸಿದ್ದಾರೆ.
ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಬಿಜೆಪಿ ಹೇಳಿಕೊಂಡು ಬಂದಿತ್ತು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್ ಗೆ ಬರುತ್ತವೆ ಎಂದು ಹೇಳಿದ್ದೀರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ಪಕ್ಷದ ಮುಖಂಡರು ಪ್ರಶ್ನಿಸಿದ್ದಾರೆ.
ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು
ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ ಅವರ ಜತೆ ಮಾತನಾಡುವಂತೆ ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು