3:04 AM Wednesday16 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಲೋಕಸಭಾ ಚುನಾವಣೆ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಚುನಾವಣಾ ಕಾರ್ಯನಿರ್ವಹಣಾ ತಂಡದ ಸಭೆ

20/03/2024, 11:17

ಮಂಗಳೂರು(reporterkarnataka.com): ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ “ಚುನಾವಣಾ ಕಾರ್ಯನಿರ್ವಹಣಾ ತಂಡ”ದ ಸಭೆಯು ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ನಡೆಯಿತು.


ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್‌ ಅವರು, ಭಾರತದ ಹೆಮ್ಮೆಯ ಪ್ರಧಾನಿಯಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಶತಃ ಸಿದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್‌ ಚೌಟ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿ ಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ಮುಂದಿನ 35ರಿಂದ 40 ದಿನಗಳ ಕಾಲ ಪಕ್ಷಕ್ಕಾಗಿ ಸಂಪೂರ್ಣ ಸಮಯ ಕೊಡುವ ಮೂಲಕ ಈಗಿನಿಂದಲೇ ಕಾರ್ಯೋನ್ಮುಖರಾಗೋಣವೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್‌ ಕುಮಾರ್‌, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್‌ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲದ ಚುನಾವಣಾ ಪ್ರಭಾರಿಗಳಾದ ರಾಕೇಶ್‌ ರೈ, ಲೋಕಸಭಾ ಚುನಾವಣಾ ಮಂಡಲ ಪ್ರಭಾರಿಗಳಾದ ರವಿಶಂಕರ್‌ ಮಿಜಾರ್‌, ಲೋಕಸಭಾ ಚುನಾವಣಾ ಮಂಡಲ ಸಂಚಾಲಕರಾದ ವಿಜಯ್‌ ಕುಮಾರ್‌ ಶೆಟ್ಟಿ, ಮಾಜಿ ಸಚಿವರಾದ ನಾಗರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್‌ ಕುಮಾರ್‌ ಹಾಗೂ ರಮೇಶ್‌ ಹೆಗ್ಡೆ ಸೇರಿದಂತೆ ಚುನಾವಣಾ ಕಾರ್ಯನಿರ್ವಹಣಾ ತಂಡದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು