ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮತ್ತೆ ಮುಂದುವರಿದ ಕಾಡಾನೆ ಹಾವಳಿ; ಹೆದ್ದಾರಿ ಬದಿಯ ಗ್ರಾಮಕ್ಕೆ ಲಗ್ಗೆ; ಲಕ್ಷಾಂತರ ಮೌಲ್ಯದ ಬೆಳೆ ನಾಶ
21/03/2024, 12:49
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಬಂದ ಕಾಡಾನೆ ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ, ಕಾಫಿ, ಮೆಣಸು ಬೆಳೆ ನಾಶಪಡಿಸಿದೆ.
ಆನೆ ದಾಳಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಮೂಡಿಗೆರೆ ತಾಲೂಕಿನ ತರುವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ರಸ್ತೆಯ ಪಕ್ಕದಲ್ಲೇ ತರುವೆ ಗ್ರಾಮ ಇದೆ.
ರೈತ ನವೀನ್ ಎಂಬುವವರ ತೋಟಕ್ಕೆ ನುಗ್ಗಿದ ಕಾಡಾನೆ ಬೆಳೆ ನಾಶಪಡಿಸಿವೆ. ಕೊಟ್ಟಿಗೆಹಾರ ಸುತ್ತಮುತ್ತ ಗ್ರಾಮಗಳಲ್ಲಿ ಆನೆ ದಾಳಿ ಆತಂಕ ಎದುರಾಗಿದೆ.
ಕಾಫಿ ತೋಟದ ಕೂಲಿಗೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟ, ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. 3-4 ತಿಂಗಳಿಂದ ಮೂಡಿಗೆರೆಯಲ್ಲಿ ನಿರಂತರ ಕಾಡಾನೆ ದಾಳಿ ಮುಂದುವರಿದಿದೆ.ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಮೂಡಿಗೆರೆ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.