ಇತ್ತೀಚಿನ ಸುದ್ದಿ
ನೂತನ ನಿಗಮ ಮಂಡಳಿ ಸದಸ್ಯರಿಗೆ ದ.ಕ. ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಅಭಿನಂದನೆ, ಸನ್ಮಾನ
21/03/2024, 19:28

ಮಂಗಳೂರು(reporterkarnataka.com):ರಾಜ್ಯ ಸರಕಾರದಿಂದ ನೇಮಕಗೊಂಡ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಐವನ್ ಡಿಸೋಜ ಅವರ ನೇತೃತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ನೂತನ ನಿಗಮ ಮಂಡಳಿ ಸದಸ್ಯರನ್ನು ದ.ಕ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಅಭಿನಂದಿಸಿದರು.
ಮಾಜಿ ಶಾಸಕ ಜೆ. ಆರ್. ಲೋಬೊ, ಬ್ಲಾಕ್ ಅಧ್ಯಕ್ಷ ಪ್ರಕಾಶ್. ಬಿ. ಸಾಲಿಯಾನ್, ಅಬ್ದುಲ್ ಸಲಿಂ ಮೊದಲಾದವರು ಉಪಸ್ಥಿತರಿದ್ದರು.