1:47 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ

21/03/2024, 21:56

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು.
ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಈ ಕಾರ್ಯಕ್ರಮವು , ಬೆಸೆಂಟ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ. ಸಿ., ಅಧ್ಯಕ್ಷತೆಯಲ್ಲಿ ನಡೆಯಿತು. ಸಂಗೋಷ್ಠಿಯ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾ, ವಲಯ ಕಚೇರಿಯ
ನೆಟ್ ವರ್ಕ್ ಉಪ ಮಹಾಪ್ರಬಂಧಕ ಅಶ್ವಿನಿ ಕುಮಾರ್, ಬೆಸೆಂಟ್ ಮಹಿಳಾ ಕಾಲೇಜ್ ನ ಆಡಳಿತ ಅಧಿಕಾರಿಯಾದ ಪ್ರೊ. ರಾಜಶೇಖರ ಹೆಬ್ಬಾರ್, ಕಾರ್ಯಕ್ರಮದ ಉಪಾಧ್ಯಕ್ಷರಾದ ಡಾ. ಮಂಜುಳಾ ಕೆ. ಟಿ. ಉಪಸ್ಥಿತರಿದ್ದರು. ಕಾಲೇಜಿನ ಹಿಂದೀ ವಿಭಾಗಧ್ಯಕ್ಷರಾದ ಡಾ. ಪರಶುರಾಮ್ ಮಾಲಗೆ ಮತ್ತು ಬ್ಯಾಂಕ್ ಆಫ್ ಬರೋಡಾದ ರಾಜಭಾಷಾ ಅಧಿಕಾರಿಯಾದ ಪುಷ್ಪಲತಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು