ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಂದು ಬಲಿ; 2 ವರ್ಷಗಳಲ್ಲಿ 5ಕ್ಕೂ ಹೆಚ್ಚು ಮಂದಿ ಸಾವು; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
22/03/2024, 22:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com.
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಂಚೇನಹಳ್ಳಿಯಲ್ಲಿ
ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ.
ಶ್ರೀಧರ್ ಎಂಬುವರು ಕಾಡಾನೆ ದಾಳಿಗೆ ಸಾವನ್ನಪ್ಪಿದವರು. ಸಲಗದ ದಾಳಿಗೆ ತೀವ್ರವಾಗಿ ಗಾಯಗೊಂಡ ಅವರನ್ನು
ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತ ಶ್ರೀಧರ್ ಅವರು ತಮಿಳುನಾಡು ಮೂಲದ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ.
ತಮಿಳುನಾಡಿನಿಂದ ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಹಿತ ಬಂದಿದ್ದರು.
ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಕೆ.ಆರ್.ಪೇಟೆ, ಕೆಂಚೇನಹಳ್ಳಿ ಸುತ್ತಮುತ್ತ ಒಂಟಿ ಸಲಗ ಓಡಾಡುತ್ತಿದೆ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷದಲ್ಲಿ ಆನೆ ದಾಳಿಗೆ ಐದಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.