3:36 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡಿ: ಬಂಟ್ವಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

22/03/2024, 22:34

ಬಂಟ್ವಾಳ(reporterkarnataka.com): ಕಾಂಗ್ರೆಸ್ ಬಡವರ ಪರವಾದ ಸರ್ಕಾರ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆ ಸಾಧ್ಯವಾಗಿದೆ. ಇದನ್ನು ಜನತೆಗೆ ತಿಳಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಳೆದ ಮೂವತ್ತು ದಶಕಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಉತ್ತಮ ಯೋಜನೆಗಳು ಜಾರಿಯಾಗಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ಅನೇಕ ಉತ್ತಮ ಕೈಗಾರಿಗಳು ಸ್ಥಾಪನೆಯಾಗಿವೆ. ಪ್ರತಿ ಮನೆಗೂ ತೆರಳಿ ಅಭಿವೃದ್ಧಿಗಾಗಿ ಮತ ಕೇಳಿ ಎಂದು ಅವರು ಹೇಳಿದರು.


ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಎಸ್. ಮೊಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಅಶ್ವಿನ್ ಕುಮಾರ್ ರೈ, ಕೆಪಿಸಿಸಿ ಸದಸ್ಯರು ಯೂಸೆಲ್ ರೋಡ್ರಿಗೆಸ್, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು