11:06 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಶಾಸಕ ಡಾ. ಭರತ್ ಶೆಟ್ಟಿ ಆರೋಪ

23/03/2024, 00:09

ಮಂಗಳೂರು(reporterkarnataka.com): ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ದೇಗುಲವೆನಿಸಿದ ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಕ್ರಮ ಜರುಗಿಸದೆ ದೇಶ ವಿರೋಧಿ ನೀತಿ ಅನುಸರಿಸಿರುವುದು ಸ್ಪಷ್ಟವಾಗಿದೆ. ಆದರೆ ಗೋಹಂತಕರ ವಿರುದ್ಧ ಹೋರಾಡುವ ಹಿಂದೂ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ಹಾಕುತ್ತಿದೆ ಎಂದು ಅವರು ಟೀಕಿಸಿದರು.
ಕಾಂಗ್ರೆಸ್ ಪಕ್ಷ ತನ್ನ ಗ್ಯಾರಂಟಿಗಳಿಗೆ ಹಾಗೂ ಜಾಹೀರಾತುಗಳಿಗೆ ರಾಜ್ಯದ ಜನತೆಯ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ಬೊಕ್ಕಸವನ್ನು ಬರಿದಾಗಿಸಿ ಆಡಳಿತ ವ್ಯವಸ್ಥೆಯಲ್ಲಿ ವೈಫಲ್ಯ ಉಂಟಾಗಿ ಕಾನೂನು ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.
ಇಡೀ ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ ಬರಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜನರು ವಲಸೆ ಹೋಗುತ್ತಿದ್ದಾರೆ. ಆದರೆ ಸರಕಾರಕ್ಕೆ ಮಾತ್ರ ರೈತರ ಬಗ್ಗೆ ಕಾಳಜಿಯಿಲ್ಲ. ಸರಕಾರ ಕೊಡುವ ಪರಿಹಾರದ ಆಸೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲರ ಹೇಳಿಕೆ ರೈತವಿರೋಧಿ ನಡೆಯಲ್ಲವೇ ಎಂದು ಶಾಸಕರು ಪ್ರಶ್ನಿಸಿದರು.

*ಕಾಂಗ್ರೆಸ್ ವೈಫಲ್ಯ:*
* ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಕಾರ ಮುಚ್ಚುತ್ತಿದೆ. ಟ್ಯಾಂಕರ್ ಮಾಫಿಯಾದ ಜತೆಯಾಗಿ ನೀರಿನ ದರ ದುಪ್ಪಟ್ಟಾಗಿದೆ. ಕೈಗಾರಿಕಾ ಪ್ರದೇಶಗಳಿಗೆ ನೀರು ಪೂರೈಸಲಾಗದೆ ಉದ್ಯಮಗಳು ಬಾಗಿಲು ಮುಚ್ಚುವಂತಾಗಿದೆ. ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್‌ನ ಜನವಿರೋಧಿ ನೀತಿಯಿಂದ ಜನರ ಬದುಕು ನರಕವಾಗಿದೆ.

* ಪರಿಶಿಷ್ಟ ಜಾತಿ, ವರ್ಗದವರ ಅಭಿವೃದ್ಧಿಗೆ ಸಂಬಂಧಿಸಿದ 11 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ಬೇರೆ ಉದ್ದೇಶಕ್ಕೆ ಹಾಗೂ ಗ್ಯಾರಂಟಿಗಳಿಗೆ ಸರಕಾರ ಬಳಸಿಕೊಂಡಿದೆ. ದಲಿತರು, ಶೋಷಿತ ಸಮುದಾಯದವರ ಬಗ್ಗೆ ಸಿದ್ದರಾಮಯಯ್ಯನವರ ಮೊಸಳೆ ಕಣ್ಣೀರಿಗೆ ಇದೇ ಸಾಕ್ಷಿ. ಇದು ದಲಿತ ವಿರೋಧಿ ಸರಕಾರವಾಗಿದ್ದು, ಈ ಸಮುದಾಯಗಳ ಮೇಲಿನ ಅನ್ಯಾಯ ನಿರಂತರವಾಗಿ ನಡೆಯುತ್ತಿದೆ.

* ಸಂವಿಧಾನ ಕರ್ತೃ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬದುಕಿದ್ದಾಗ ಮಾತ್ರವಲ್ಲದೆ, ಮೃತರಾದ ಬಳಿಕವೂ ಅವರಿಗೆ ನಿರಂತರ ಅನ್ಯಾಯ ಮಾಡಿದ್ದು ಇದೇ ಕಾಂಗ್ರೆಸ್ ಪಕ್ಷ. ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದು ಕಾಂಗ್ರೆಸ್ ಪಕ್ಷ.

* ಬಿಜೆಪಿ ನೇತೃತ್ವದ ಸರಕಾರವು ಡಾ.ಬಅಂಬೇಡ್ಕರ್ ಅವರ ಜೀವನದ ಪ್ರಮುಖ ಐದು ಸ್ಥಳಗಳನ್ನು ಗುರುತಿಸಿ ಪಂಚಕ್ಷೇತ್ರಗಳ ಅಭಿವೃದ್ಧಿ ಮಾಡಿ ಗೌರವಿಸಿದೆ.

* ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರಕಾರ, ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಗೈರುಹಾಜರಿ, ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ ಸುಳ್ಳು ಕೇಸು ಹಾಕಿಸಿ ಜೈಲಿಗೆ ಕಳುಹಿಸಿದ್ದು, ಮಂಡ್ಯದ ಕೆರೆಗೋಡಿನಲ್ಲಿ ಹನುಮಧ್ವಜ ಹಾರಿಸಿದವರ ಮೇಲೆ ಕ್ರಮ- ಇವೆಲ್ಲವೂ ಕಾಂಗ್ರೆಸಿನ ಹಿಂದೂ ವಿರೋಧಿ ಮಾನಸಿಕತೆಗೆ ಒಂದೆರಡು ಉದಾಹರಣೆಗಳಷ್ಟೆ.

*ರಾಜ್ಯದ ಖಜಾನೆ ಖಾಲಿಯಾಗಿದೆ. ಹಿಂದಿನ ಯುಪಿಎ ಸರಕಾರಕ್ಕೆ ಹೋಲಿಸಿದರೆ ಕೇಂದ್ರದ ಬಿಜೆಪಿ ಸರಕಾರವು ರಾಜ್ಯಕ್ಕೆ ಶೇ. 200ಕ್ಕೂ ಹೆಚ್ಚು ಮೊತ್ತವನ್ನು ಕೊಟ್ಟಿದ್ದರೂ ಕೇಂದ್ರದತ್ತ ಬೊಟ್ಟು ಮಾಡಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ದಾರಿ ತಪ್ಪಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಖಜಾಂಚಿ ಸಂಜಯ ಪ್ರಭು, ದ.ಕ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾ ಉಪ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಮತ್ತು ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು