7:57 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಡೂರು ಸಮೀಪ ಲಾರಿ- ಬೈಕ್ ಡಿಕ್ಕಿ; ಪತ್ನಿ ಸ್ಥಳದಲ್ಲೇ ಸಾವು; ಎಎಸ್ಪಿ ಗನ್ ಮ್ಯಾನ್ ಗಂಭೀರ ಗಾಯ

24/03/2024, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ತಂಗಲಿ ಬಳಿ ಲಾರಿ-ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಎಸ್ಪಿ ಗನ್ ಮ್ಯಾನ್ ತೀವ್ರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆ ಎಎಸ್ಪಿ ಗನ್ ಮ್ಯಾನ್ ಜಯಣ್ಣ ಹಾಗೂ ಅವರ ಪತ್ನಿ ಸುಮಾ(25) ಅವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಗನ್ ಮ್ಯಾನ್ ಜಯಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಅವರ ಪತ್ನಿ ಸುಮಾ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಜಯಣ್ಣ ಅವರು ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ಹೊರಟಿದ್ದರು.


ಪತ್ನಿ ಜೊತೆ ಬೈಕಿನಲ್ಲಿ ರೈಲ್ವೆ ಸ್ಟೇಷನ್ ಗೆ ಹೋಗುವಾಗ ಅಪಘಾತ ಸಂಭವಿಸಿದೆ. ಒನ್ ವೇ ನಲ್ಲಿ ಬಂದ ಲಾರಿ ಚಾಲಕನಿಂದ ಅಪಘಾತ ಉಂಟಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಜಯಣ್ಣ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು