1:54 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಸೈಬರ್ ಅಪರಾಧ: ರಾಜಸ್ಥಾನದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; 1.15 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ

24/03/2024, 23:14

ಮಂಗಳೂರು(reporterkarnataka.com): ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇದೆ ಎಂದು ನಂಬಿಸಿ 1.15 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿ.ಈ.ಎನ್. ಕ್ರೈಂ ಪೊಲೀಸರು ರಾಜಸ್ಥಾನ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.
ರಾಜಸ್ಥಾನದ ಜೋಧ್ ಪುರ್ ಜಿಲ್ಲೆಯ ಬಾವುರಿ ಗ್ರಾಮದ ನಿವಾಸಿಯಾದ ಸದ್ದಾಂ ಗೌರಿ ಅಲಿಯಾಸ್ ಬಾವುರಿ (30) ಎಂಬಾತನನ್ನು ಬಾವುರಿ ಗ್ರಾಮದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಈ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಕುರಿತು 131/2023 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿಯಡಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಪಿರ್ಯಾದಿದಾರಿಗೆ ಸಂದೇಶ ಕಳುಹಿಸಿ ಪಾರ್ಟ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಪಿರ್ಯಾದಿದಾರರಿಂದ ಒಟ್ಟು 1,15,000 ಹಣ ಪಡೆದು ವಂಚಿಸಿದ್ದ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಎರಡು ಮೊಬೈಲ್ ಫೋನ್ , 8 ಡೆಬಿಟ್ ಕಾರ್ಡ್, 4 ಬ್ಯಾಂಕ್ ಚೆಕ್ ಬುಕ್ ಗಳು, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹಾಗೂ ಡಿಸಿಪಿ ಸಿದ್ದಾರ್ಥ ಗೊಯಲ್ ಅವರ ಮಾರ್ಗದರ್ಶನದಂತೆ, ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ಅವರ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು