5:34 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಮಂಗಳೂರು: ದ.ಕ. ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ನಾಳೆ ಉದ್ಘಾಟನೆ

25/03/2024, 16:54

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ಮಾ.26ರಂದು ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.
ನಗರದ ಎಂ.ಜಿ. ರಸ್ತೆಯ ಲಾಲ್‌ಬಾಗ್‌ನಿಂದ (ಮಹಾನಗರಪಾಲಿಕೆ ಕಟ್ಟಡದ ಬಲಭಾಗದ ರಸ್ತೆ) ಮಣ್ಣಗುಡ್ಡೆಗೆ ತೆರಳುವ ರಸ್ತೆ ಸಮೀಪ ನೂತನ ಚುನಾವಣಾ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ, ಅಭಯಚಂದ್ರ ಜೈನ್, ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು