4:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ ಚಾಲನೆ

26/03/2024, 15:29

*ಲಾಲ್'ಭಾಗ್'ನಲ್ಲಿ ಉದ್ಘಾಟನೆಗೊಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ನಗರದ ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು