2:31 AM Friday28 - November 2025
ಬ್ರೇಕಿಂಗ್ ನ್ಯೂಸ್
Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್

ಇತ್ತೀಚಿನ ಸುದ್ದಿ

Sports News | ಕಿಕ್‌ಬಾಕ್ಸಿಂಗ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್

13/08/2021, 14:19

ಬಜಪೆ (ReporterKarnataka.com)

ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದಲ್ಲಿ ರಿಂಗ್ ಫೈಟ್ ಲೋ ಕಿಕ್ ವಿಭಾಗದಲ್ಲಿ ಸ್ಪರ್ಧಿಸಿ ಪ್ರಶಸ್ತಿ ಗೆದ್ದಿರುವ ಹೈಮಾನ್
ಮಾರ್ಷಲ್ ಆರ್ಟ್ಸ್‌ನ ಕರಾಟೆ ಹಾಗೂ ಇತರ ಮಾದರಿಗಳಲ್ಲಿಯೂ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿ ಪದಕಗಳನ್ನು ಜಯಿಸಿದ್ದಾರೆ. ಈಗ ಕಿಕ್ ಬಾಕ್ಸಿಂಗ್‌ನಲ್ಲಿಯೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಕರಾವಳಿಯ ಮಾರ್ಷಲ್ ಆರ್ಟ್ಸ್ ಪ್ರಿಯರಿಗೆ ಹರುಷವನ್ನು ತಂದಿದೆ.

ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೋವಾದಲ್ಲಿ ನಡೆಯಲಿದೆ. ಇದರಲ್ಲಿ ಆಯ್ಕೆಯಾದರೆ ಬ್ಯಾಂಕಾಕ್‌ನಲ್ಲಿ ನಡೆಯಲಿರುವ ಏಷ್ಯನ್ ಇಂಡೋರ್ ಹಾಗೂ ಮಾರ್ಷಿಯಲ್ ಆರ್ಟ್ಸ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪ್ರಸ್ತುತ ಹೈಮಾನ್ ಮಾರ್ಷಲ್ ಆರ್ಟ್ಸ್ ತರಬೇತುದಾರ ನಿತಿನ್ ಎನ್.ಸುವರ್ಣ ಹಾಗು ಸಹಾಯಕ ತರಬೇತುದಾರ ಸಂಪತ್ ಕುಮಾರ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು