12:47 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ

13/08/2021, 14:37

ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಶುಕ್ರವಾರ ನಡೆಯಿತು.

ಕೊರೊನಾದ ಕಷ್ಟ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವ
ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸುಕನ್ಯಾ, ಪೂರ್ಣಿಮಾ, ಶೋಭಾ ಮತ್ತು ಅಮಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಸಂಚಾಲಕ ಜಯಪ್ರಕಾಶ್ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಲ್ಕಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವ ಪೂಜಾರಿ, ಉದ್ಯಮಿಗಳಾದ ಶ್ರೀಕರ್ ಭಟ್, ನಾಗರಾಜ ಭಟ್ ಭಾಗವಹಿಸಿದ್ದರು. ನಾಗರಾಜ ಶೆಟ್ಟಿ ಅಂಬೂರಿ, ಅಭಿಷೇಕ್ ಶೆಟ್ಟಿ ಐಕಳ, ದೇವಿಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್ ನಿಡ್ಡೋಡಿ, ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು