5:08 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ಸಂಭ್ರಮದ ರಥೋತ್ಸವ: ಸಹಸ್ರಾರು ಭಕ್ತರಿಂದ ವಿಶೇಷ ಪೂಜೆ

27/03/2024, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.


ಬೆಳಿಗ್ಗೆಯೇ ಫಲ್ಗುಣಿ ಗ್ರಾಮದ ವ್ಯಾಪ್ತಿಯ ಜನರು ದೇವಸ್ಥಾನಕ್ಕೆ ತೆರಳಿ ಹಣ್ಣು ಕಾಯಿ ಮಾಡಿಸಿದರು. ಮಹಾಮಂಗಳಾರತಿ ಕಾರ್ಯದಲ್ಲಿ ಭಾಗವಹಿಸಿ ಕಲಾನಾಥೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥರಾದರು. ಮಂಗಳವಾರ ಸಂಜೆ 4.30ರಿಂದ ಸುತ್ತಮುತ್ತಲಿನ ಗ್ರಾಮಸ್ಥರು, ಹಿರಿಯ ಮುಖಂಡರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ರಥವನ್ನು ಎಳೆದು ಸಂಭ್ರಮಿಸಿದರು. ದೇವಸ್ಥಾನದ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಭಾಗವಹಿಸಿ ಉತ್ಸವಕ್ಕೆ ಕಳೆ ತಂದರು.
ಉತ್ಸವದ ಎರಡನೇ ದಿನವಾದ ಬುಧವಾರ ಕಲಾನಾಥೇಶ್ವರ ಸ್ವಾಮಿ ಹಾಗೂ ಪಾರ್ವತಿ ಅಮ್ಮನವರಿಗೆ ನೀರೋಕಳಿ ಪೂಜೆಯನ್ನು ನೆರವೇರಿಸಲಾಯಿತು. ದೇವರಿಗೆ ಅವಭೃತ ಸ್ನಾನವನ್ನು ನೆರವೇರಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು