12:51 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು