5:36 PM Monday13 - May 2024
ಬ್ರೇಕಿಂಗ್ ನ್ಯೂಸ್
ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ…

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ

29/03/2024, 12:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಾಲಂಕಾರ ತೇರಡಿ ಹಾಗೂ ಶಾಂತ್ಯುತ್ಸವವು ಬಹಳ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಬೆಳಗ್ಗೆ ರಥಾರೋಹಣ ನಡೆದ ಮೇಲೆ ರಾತ್ರಿ ವೇಳೆಗೆ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಆಂಡಾಳಮ್ಮ ಹಾಗೂ ಶ್ರೀ ಅರವಿಂದ ನಾಯಕಿ ಅಮ್ಮನವರ ಸಮೇತ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ಹೊರ ತೆಗೆದು ಬಳಿಕ ಮೇಲುಕೋಟೆ ಶ್ರೀ ವೈರಮುಡಿ ಉತ್ಸವದ ಮಾದರಿಯಲ್ಲಿ ವಿಶೇಷವಾಗಿ ಹೂಗಳಿಂದ ಅಲಂಕರಿಸಲಾದ ಉತ್ಸವ ಮೂರ್ತಿಗಳನ್ನು ಶುಕ್ರವಾರದ ಬೆಳಗಿನ ಜಾವದವರೆಗೂ ಗ್ರಾಮದಲ್ಲಿ ಉತ್ಸವ ನಡೆಸಲಾಗುತ್ತದೆ. ವಿದ್ಯುತ್ ದೀಪಗಳಿಂದ ವಿಶೇಷವಾಗಿ ಮಂಟಪದ ರೀತಿಯಲ್ಲಿ ಅಲಂಕರಿಸಿದ ನಡು ಚಪ್ಪರದಲ್ಲಿ ಅಲಂಕೃತ ಉತ್ಸವ ಮೂರ್ತಿಗಳನ್ನು ಗ್ರಾಮಸ್ಥರು ಹೆಗಲ ಮೇಲೆ ಹೊತ್ತು ನಡೆಸುವ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡು ದೇವರಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ತೇರಡಿ ಉತ್ಸವದ ಅಂಗವಾಗಿ ಗ್ರಾಮದ ಎಲ್ಲ ದೇವಾಲಯಗಳು ಸೇರಿದಂತೆ ರಥ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಹೋರಾತ್ರಿ ಮಂಗಳವಾದ್ಯ ಗೋಷ್ಠಿಗಳು ನಡೆದವು.
ತಿಂಡಿ ತಿನಿಸು, ಪೂಜಾ ಸಾಮಗ್ರಿಗಳು, ಸ್ಟೇಷನರಿ, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದು ವ್ಯಾಪಾರ ವಹಿವಾಟುಗಳು ಜೋರಾಗಿಯೇ ನಡೆದವು.
ಗ್ರಾಮವು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ತೇರಡಿ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ದೇವಾಲಯದ ಪಾರುಪತೆಗಾರ ಜಯರಾಮ್ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ತೇರಡಿ ಉತ್ಸವವು ಅದ್ದೂರಿಯಾಗಿ ನಡೆಯಿತು. ಆಗಮಿಕರಾದ ವಿನಯ್ ಭಟ್ ಮಾತನಾಡಿ ಉತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು