5:51 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ

29/03/2024, 12:55

ಮಂಗಳೂರು(reporterkarnataka.com): ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ನಡೆಯಿತು.
ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬಗ್ಗೆ ವರದಿಯನ್ನು ಪಡೆದರು. ಇನ್ನಷ್ಟು ಮತದಾರರನ್ನು ತಲುಪಲು ಕೈಗೊಳ್ಳಬೇಕಾಗಿರುವ ಕಾರ್ಯಚಟುವಟಿಕೆಗಳ ಬಗ್ಗೆ ಗಮನಹರಿಸಿ ಮತ್ತಷ್ಟು ವೇಗದಲ್ಲಿ ಕೆಲಸಗಳು ನಡೆಯುವಂತೆ ಪ್ರೇರೇಪಿಸಿದರು. ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ, ಏಪ್ರಿಲ್ 4ರಂದು ನಡೆಯಲಿರುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಲೋಕಸಭಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲೆಯ ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ಮಂಡಲಗಳ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು, ಪ್ರಕೋಷ್ಟಗಳ ಸಂಚಾಲಕರುಗಳು ಸೇರಿದಂತೆ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.
ದೇವದಾಸ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು