2:16 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ತುಮಕೂರಿನಲ್ಲಿ ಕೊಲೆಗೀಡಾದ ಮೂವರ ಮೃತದೇಹ ಹುಟ್ಟೂರಿಗೆ: 7 ದಿನಗಳ ಬಳಿಕ ಅಂತ್ಯ ಸಂಸ್ಕಾರ

29/03/2024, 17:50

ಬೆಳ್ತಂಗಡಿ(reporterkarnataka.com): ತುಮಕೂರಿನಲ್ಲಿ ಇತ್ತೀಚೆಗೆ ಕಾರಿನೊಳಗೆ ಕೂಡಿ ಹಾಕಲ್ಪಟ್ಟು ಅಮಾನುಷವಾಗಿ ಹತ್ಯೆಗೀಡಾದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ ಶುಕ್ರವಾರ ನೆರವೇರಿಸಲಾಯಿತು.
ಕೊಲೆಯಾದವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಕುಟುಂಬಸ್ಥರ ಹಾಗೂ ಬಂಧು- ಬಳಗದವರ ಆಕ್ರಂಧನದ ನಡುವೆ ಮಧ್ಯಾಹ್ನದ ವೇಳೆ ಅಂತಿಮ ಸಂಸ್ಕಾರ ನಡೆಸಲಾಯಿತು.
ಬೆಳ್ತಂಗಡಿಯ ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ತಿಯಾಝ್ ಎಂಬವರನ್ನು ಕೊಲೆ ಮಾಡಲಾಗಿತ್ತು. ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆಯ ಸಮೀಪ ಪತ್ತೆಯಾಗಿದ್ದವು. ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ 7 ದಿನಗಳ ಬಳಿಕ ಅಂತ್ಯ ಸಂಸ್ಕಾರ ನಡೆಸಲಾಯಿತು.
ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹಗಳನ್ನು ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸೀದಿಗೆ ಹಾಗೂ ಸಿದ್ದೀಕ್ ಅವರ ಮೃತದೇಹವನ್ನು ಶಿರ್ಲಾಲು ಮಸೀದಿಗೆ ತಂದು ಅಲ್ಲಿ ಅಂತಿಮ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು