3:17 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ದ.ಕ.ಜಿಲ್ಲೆಯ ಲೆಕ್ಕ ವೀಕ್ಷಕರಾಗಿ ಮೆರಗು ಸುರೇಶ್ ನೇಮಕ

29/03/2024, 18:39

ಮಂಗಳೂರು(reporterkarnataka.com): 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು 17-ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನಾಗಿ ಐಆರ್ ಎಸ್ ಅಧಿಕಾರಿ ಮೆರಗು ಸುರೇಶ್ ಅವರನ್ನು ನಿಯೋಜಿಸಿದೆ.
ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣೆಯಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದ ದೂರು, ಅಹವಾಲುಗಳನ್ನು ಸಾರ್ವಜನಿಕರು ಚುನಾವಣಾ ವೀಕ್ಷಕರಿಗೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅವರು ಕೇಂದ್ರ ಸ್ಥಾನದಲ್ಲಿರುವ ಸಂದರ್ಭದಲ್ಲಿ ಪ್ರತಿದಿನ ಬೆಳಿಗ್ಗೆ 9:30 ರಿಂದ 10.30 ರವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ (ಪಲ್ಗುಣಿ ಬ್ಲಾಕ್) ನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. ಇವರ ಮೊಬೈಲ್ ಸಂಖ್ಯೆ 9482757817 ಹಾಗೂ ದೂರವಾಣಿ ಸಂಖ್ಯೆ 0824-2001596 ಆಗಿದೆ.
ಅವರ ಇ-ಮೆಲ್ ಐಡಿ: expenditureobserverdk17@gmail.com
ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು