9:56 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸ್ವೀಪ್ ಸಮಿತಿಯಿಂದ ಮತದಾರರಲ್ಲಿ ಜಾಗೃತಿ ಕಾರ್ಯಕ್ರಮ: ಮಾನವ ಸರಪಳಿ

30/03/2024, 20:56

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಚಿತ್ರದುರ್ಗ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಚಳ್ಳಕೆರೆ ವತಿಯಿಂದ ಚಿತ್ರದುರ್ಗ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಚಳ್ಳಕೆರೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಸ್ವೀಪ್ ಸಮಿತಿ
ಅಧ್ಯಕ್ಷ ಲಕ್ಷ್ಮಣ ಬಿ. ಎಸ್. ಚಾಲನೆ ನೀಡಿದರು. ಭಾರತ ಚುನಾವಣಾ ಆಯೋಗವು ಈಗಾಗಲೇ ಲೋಕಸಭೆಗೆ ಸಾರ್ವರ್ತ್ರಿಕ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದು ಅದರಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆಯ ದಿನಾಂಕ 26.4.2024 ರಂದು ನಡೆಯಲಿದ್ದು, ಆ ದಿನದಂದು ಈಗಾಗಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕೆಂದು ಮನವಿ ಮಾಡಿದರು. ಯಾವುದಾದರೂ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಭಾರತ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ಸಿ ವಿಜಿಲ್ ಆ್ಯಪ್ ಮೂಲಕ ಚುನಾವಣಾ ಆಯೋಗಕ್ಕೆ ದೂರನ್ನು ದಾಖಲಿಸಬಹುದಾಗಿದೆ ಎಂದು ತಿಳಿಸಿದರು.



ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿದರು. ಈ ಸಮಯದಲ್ಲಿ ತಹಶೀಲ್ದಾರ್ ರೆಹನ್ ಪಾಷ, ನಗರಸಭೆ ಆಯುಕ್ತ ಜೀವನ್ ಕಟ್ಟಿಮನಿ, ತಾಲೂಕು ಆರೋಗ್ಯ ಅಧಿಕಾರಿ ಕಾಶಿ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಸಂತೋಷ, ಸಂಪತ್ ಕುಮಾರ್, ನಗರಸಭೆ ಸಿಬ್ಬಂದಿ ವರ್ಗದವರು, ತಾಲೂಕು ಪಂಚಾಯಿತಿಯ ಸಿಬ್ಬಂದಿ ವರ್ಗದವರು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಮತದಾರರಲ್ಲಿ ಜಾಗೃತಿ ಮೂಡಿಸುವ ಜಾತ ಕಾರ್ಯಕ್ರಮವು ಚಳ್ಳಕೆರೆ ನಗರದ ಶ್ರೀ ವಾಲ್ಮೀಕಿ ವೃತ್ತದಿಂದ ಪ್ರಾರಂಭವಾಗಿ ನೆಹರು ವೃತ್ತದ ವರೆಗೆ ಸಾಗಿ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು