4:49 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ

ಇತ್ತೀಚಿನ ಸುದ್ದಿ

ರಾಜ್ಯಸಭೆಯಲ್ಲಿ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ: ಸಭಾಪತಿ ಕಾಗೇರಿ ಖೇದ

13/08/2021, 19:51

ಬೆಂಗಳೂರು(reporterkarnataka.com): ರಾಜ್ಯಸಭೆಯಲ್ಲಿ ಆಗಸ್ಟ್ 10ರಂದು ನಡೆದ ಅಹಿತಕರ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದ್ದು, ಇದರಿಂದಾಗಿ ಇಡೀ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ಯಾವ ರಾಜ್ಯಸಭೆ ದೇಶದ ಸಂವಿಧಾನ ವ್ಯವಸ್ಥೆಗೆ ಮಾದರಿಯಾಗಿರಬೇಕಾಗಿತ್ತೋ ಅದೇ ರಾಜ್ಯಸಭೆಯಲ್ಲಿ ನಡೆದಿರುವ ಗದ್ದಲ, ತಳ್ಳಾಟ, ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿರುವುದು ತುಂಬಾ ಖೇದಕರ ಪ್ರಸಂಗವಾಗಿದೆ ಎಂದು

ವಿಧಾನ ಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ದೇಗುಲದಲ್ಲಿ ನಡೆದಿರುವ ಇಂತಹ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಇಂತಹ ದುರ್ವರ್ತನೆಗೆ ಕಾರಣರಾದವರ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಲೋಕಸಭೆ ಅಧ್ಯಕ್ಷರು ಹಾಗೂ ರಾಜ್ಯಸಭೆ ಸಭಾಪತಿಯವರಲ್ಲಿ ವಿನಂತಿಸುವ ಕುರಿತಂತೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು