ಇತ್ತೀಚಿನ ಸುದ್ದಿ
ಮಹಿಳಾ ಪೊಲೀಸ್ ಸಿಬ್ಬಂದಿ ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ನೇಣಿಗೆ ಶರಣು
31/03/2024, 21:09

ಉಡುಪಿ(reporterkarnataka.com): ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ಕಾಪು ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಜ್ಯೋತಿ ಅವರು,ರಾತ್ರಿ ಕ್ವಾಟ್ರಸ್‌ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಯ
ಕಾರಣ ಇನ್ನೂ ತಿಳಿಯಬೇಕಿದೆ. ಜ್ಯೋತಿ ಅವರ ಪತಿ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಯಾಗಿದ್ದು, ಪತಿ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದು ಬೆಳಕಿಗೆ ಬಂದಿದೆ.