1:54 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎಸ್‍ಸಿಡಿಸಿಸಿ ಬ್ಯಾಂಕಿಗೆ 79.09 ಕೋಟಿ ರೂ. ದಾಖಲೆ ಲಾಭ: ಡಾ.ಎಂ.ಎನ್. ರಾಜೇಂದ್ರ ಕುಮಾರ್

05/04/2024, 12:28

ಮಂಗಳೂರು(reporterkarnataka.com): ಕರಾವಳಿಯ ಪ್ರತಿಷ್ಠೆಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2024ರ ಮಾ.31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ 79.09 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷದ ಲಾಭ (61.29 ಕೋಟಿ ರೂ.)ಕ್ಕಿಂತ ಶೇ. 29.04 ಏರಿಕೆಯಾಗಿದೆ. ಎಸ್‍ಸಿಡಿಸಿಸಿ ಬ್ಯಾಂಕ್‍ನ ಇತಿಹಾಸದಲ್ಲೇ ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಎಸ್‍ಸಿಡಿಸಿಸಿ ಬ್ಯಾಂಕ್‍ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ವಾರ್ಷಿಕ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಅವರು ಮಾತನಾಡಿದರು.


ಎಸ್ ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ 15540.80 ಕೋಟಿ ರೂ.ಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ( 13514.51ಕೋಟಿ ರೂ.) ಈ ಬಾರಿ ಶೇ.14.99 ಏರಿಕೆ ಕಂಡಿದೆ. 2024-25ನೇ ಸಾಲಿಗೆ 18,000.00 ಕೋಟಿ ರೂ. ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದು ಡಾ. ರಾಜೇಂದ್ರ ಕುಮಾರ್ ವಿವರಿಸಿದರು.
ಎಸ್‍ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7221.37 ಕೋಟಿ ರೂ. ಠೇವಣಿ ಸಂಗ್ರಹಿಸಿ ಸಾಧನೆ ದಾಖಲಿಸಿದೆ. ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ13.33 ಏರಿಕೆಯಾಗಿದೆ.
ಸ್ಪರ್ಧಾ
ತ್ಮಕ ವ್ಯವಹಾರದಲ್ಲಿ ಬ್ಯಾಂಕ್ 6485.12 ಕೋಟಿ ರೂ. ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವ ಸಾಲವಾಗಿ 2032.28 ಕೋಟಿ ರೂ.,ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು 2169.27 ಕೋಟಿ ರೂ. ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ 4315.85 ಕೋಟಿ ರೂ. ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ 8319.43 ಕೋಟಿ ರೂ. ಆಗಿದೆ.
ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇ. 100ರ ಮರುಪಾವತಿಗೊಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 29 ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
ಬ್ಯಾಂಕ್‍ಗೆ ಒಟ್ಟು 1072 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ 403.59 ಕೋಟಿ ರೂ. ಆಗಿರುತ್ತದೆ. ದುಡಿಯುವ ಬಂಡವಾಳ ರೂ.11379.23 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ (ರೂ.9930.69 ಕೋಟಿ) ಶೇ. 14.59ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.261.00 ಕೋಟಿ ವಿವಿಧ ನಿಗಳನ್ನು ಹೊಂದಿದೆ. ಶೇ. 8.38ರಷ್ಟು ಏರಿಕೆ ಕಂಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ ಕಿಸಾನ್ ಕಾರ್ಡ್‍ನ್ನು ನೀಡಿದೆ. ಈಗಾಗಲೇ 1,37,010 ರುಪೇ ಕಿಸಾನ್ ಕಾರ್ಡ್‍ಗಳನ್ನು ರೈತರಿಗೆ ವಿತರಿಸಲಾಗಿದೆ. 80,668 ರುಪೇ ಡೆಬಿಟ್ ಕಾರ್ಡ್‍ಗಳನ್ನು ಬ್ಯಾಂಕ್‍ನ ಇತರ ಗ್ರಾಹಕರಿಗೆ ನೀಡಲಾಗಿದೆ.
ಕೇಂದ್ರ ಸರಕಾರದ ಮಹತ್ತರ ಯೋಜನೆಯಾದ `ಅಟಲ್ ಪಿಂಚಣಿ ಯೋಜನೆ’ಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ. 89,138 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ. ಸಿಬ್ಬಂದಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಕೇಂದ್ರ ಸಹಕಾರಿ ಬ್ಯಾಂಕ್ ಎಸ್‍ಸಿಡಿಸಿಸಿ ಬ್ಯಾಂಕ್ ಆಗಿದೆ. ಉಭಯ ಜಿಲ್ಲೆಗಳ 14 ಶಾಖೆಗಳಲ್ಲಿ ಎ.ಟಿ.ಎಂ. ಅಳವಡಿಸಲಾಗಿದೆ ಎಂದು ಡಾ.ಎಂ.ಎನ್. ರಾಜೇಂದ್ರಕುಮಾರ್ ವಿವರಿಸಿದರು.
ಈ ಸಂದರ್ಭದಲ್ಲಿ
ಎಸ್‍ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್, ಸದಸ್ಕರ ಎಸ್.ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರೀಶ್ಚಂದ್ರ, ಕೆ.ಜೈರಾಜ್ ಬಿ.ರೈ, ಎಂ. ಮಹೇಶ್ ಹೆಗ್ಡೆ, ಬಿ.ಅಶೋಕ್‍ಕುಮಾರ್ ಶೆಟ್ಟಿ, ಕುಶಾಲಪ್ಪ ಗೌಡ ಪಿ., ಎಸ್.ಎನ್. ಮನ್ಮಥ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಕಾರಿ ಗೋಪಾಲಕೃಷ್ಣ ಭಟ್ ಕೆ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು